ಕ್ಯಾಬ್ ಚಾಲಕನ ಮೇಲೆ ಮಹಿಳೆಯರಿಂದ ಹಲ್ಲೆ

2 ladies assaulted a cab driver

01-08-2018

ಬೆಂಗಳೂರು: ಕೊತ್ತನೂರಿನ ಕಣ್ಣೂರು ಬಳಿ ಕ್ಯಾಬ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಇಬ್ಬರು ಮಹಿಳೆಯರು ಸೇರಿ ನಾಲ್ವರು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ನಾಗರಾಜ್ (25) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿ 10.45ರ ವೇಳೆ ಕಣ್ಣೂರಿನ ಸಲ್ಲುಪ್ರಿಯ ಅಪಾರ್ಟ್‍ಮೆಂಟ್ ಬಳಿ ನಿಂತಿದ್ದ ನಾಗರಾಜು ಬಳಿ ನಾಲ್ವರು ಬಂದು ಜಗಳ ತೆಗೆದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿರುವ ಕೊತ್ತನೂರು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ