ದಲಿತ ಯುವಕನ ಮೇಲೆ ಹಲ್ಲೆ

Assault on dalit guy at tumkur

02-08-2018

ತುಮಕೂರು: ದಲಿತ ಯುವಕನ ಕಾರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು‌ ಜಿಲ್ಲೆ ತುರುವೆಕೆರೆ ತಾಲ್ಲೂಕಿನ ಮಾಯಸಂದ್ರ ಬಳಿ ನಡೆದಿದೆ. ಮಾಯಸಂದ್ರ ನಿವಾಸಿ ಸಚಿನ್ (30) ಹಲ್ಲೆಗೊಳಗಾದ ದಲಿತ ಯುವಕ. ಕಳೆದ ರಾತ್ರಿ ಕಾರಿನಲ್ಲಿ ಮನೆಗೆ ಹಿಂತಿರುಗುವಾಗ ಘಟನೆ ನಡೆದಿದೆ. ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಬಂದಿದ್ದರಿಂದ ಸಚಿನ್ ರನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಮಾರಣಾಂತಿಕ ಹಲ್ಲೆಯಿಂದ ಸಚಿನ್ ಗೆ ಗಂಭೀರ ಗಾಯಗಳಾಗಿದ್ದು, ತುರುವೆಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೆಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ