3 ವರ್ಷದ ಬಾಲಕಿ ಮೇಲೆ ಹೀನ ಕೃತ್ಯ!

An 25 years boy raped a small girl at dharwad

02-08-2018 182

ಹುಬ್ಬಳ್ಳಿ: ಮೂರು ವರ್ಷದ ಬಾಲಕಿ ಮೇಲೆ 25 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದೆ. ಘಟನೆ ಸಂಬಂಧ ಬಾಲಕಿ ತಾಯಿ ಕಲಘಟಗಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೆಲಸಕ್ಕಿರುವ ಆರೋಪಿ ತನ್ನೂರಿಗೆ ಬಂದಿದ್ದಾಗ ಬಾಲಕಿ ಮೇಲೆ ಅತ್ಯಾಚಾರಗೈದಿದ್ದ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

pocso act Rape ಕಲಘಟಗಿ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ