ಬಂಡೀಪುರ ಅರಣ್ಯ ರಕ್ಷಣೆಗೆ ವಾಟಾಳ್ ಕೂಗು!

vatal nagaraj demanded to not allow the vehicles in bandipur forest at night

02-08-2018

ಬೆಂಗಳೂರು: ಯಾವುದೇ ಕಾರಣಕ್ಕೂ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ ನೀಡಬಾರದು ಎಂದು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂರನ್ನು ಭೇಟಿಯಾಗಿ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಸಡಿಲಿಕೆ ಮಾಡ ಕೂಡದು. ಕೇಂದ್ರ ಬುದ್ಧಿವಂತಿಕೆಯಿಂದ ಸೇತುವೆ ನಿರ್ಮಿಸಿ ಅರಣ್ಯಪ್ರದೇಶದಲ್ಲಿ ರಾತ್ರಿ ಸಮಯ ವಾಹನ ಸಂಚಾರಕ್ಕೆ ಅನುವು ಮಾಡಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಅನುವು ಮಾಡಿ ಕೊಡಬಾರದು ಎಂದು ಸಿಎಂರಲ್ಲಿ ಒತ್ತಾಯ ಮಾಡಿದ್ದೇವೆ ಎಂದು ತಿಳಿಸಿದರು.

ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿದರೆ ತೀವ್ರ ಹೋರಾಟ ಮಾಡುತ್ತೇವೆ. ಇದರ ಹಿಂದೆ ಮರದ ಮಾಫಿಯಾ ಇದೆ. ಕೇರಳದ ಮರದ ಲೂಟಿಕೋರರು ವಾಹನ ಸಂಚಾರ ನಿಷೇಧ ಸಡಿಲಿಕೆ ಹುನ್ನಾರದ ಹಿಂದೆ ಇದ್ದಾರೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ