ಹೆಜ್ಜೇನು ದಾಳಿಗೆ ರೈತ ಬಲಿ!

Bees attacked a farmer!

03-08-2018

ಮಂಡ್ಯ: ಹೆಜ್ಜೇನು ಹುಳಗಳ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರೆ. ಪಾಪೇಗೌಡ (59) ಮೃತ ರೈತ. ಮಂಡ್ಯ ತಾಲ್ಲೂಕಿನ ಗುನ್ನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಎಂದಿನಂತೆ ತನ್ನ ಹೊಲದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹೆಜ್ಜೇನುಗಳ ಹಿಂಡು ರೈತನ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಪಾಪೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ರೈತರು ಜಮೀನಿನ ಕಡೆಗೆ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ. ರೈತನನ್ನು ಕಳೆದುಕೊಂಡ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.


ಸಂಬಂಧಿತ ಟ್ಯಾಗ್ಗಳು

Honey Bee Farmer ಬಲಿ ಹೆಜ್ಜೇನು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ