ದೇವೇಗೌಡರಿಗೆ ಯಡಿಯೂರಪ್ಪನವರ 3 ಪ್ರಶ್ನೆಗಳು

B.S yeddyurappa asked 3 questions to h.d deve gowda?

03-08-2018

ಬೆಂಗಳೂರು: ಅಧಿಕಾರ ಸಿಗದ ಕಾರಣ ಹತಾಶೆ ಭಾವನೆಯಿಂದ ಪ್ರತ್ಯೇಕ ಉತ್ತರ ಕರ್ನಾಟಕದ ಬಗ್ಗೆ ಬಿಎಸ್ ವೈ ಹೇಳಿಕೆ ನೀಡುತ್ತಿದ್ದಾರೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ವಿರುದ್ಧ ಬಿಎಸ್ ವೈ ಗರಂ ಆಗಿದ್ದಾರೆ.

ಈ ಕುರಿತಂತೆ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, 'ಹತಾಶೆ ಭಾವನೆ ನಮ್ಮಲ್ಲಿಲ್ಲ, ಅವಕಾಶವಾದಿ ರಾಜಕಾರಣ ಬಿಜೆಪಿ ಮಾಡಿಲ್ಲ' ಎಂದು ಜೆಡಿಎಸ್ ಗೆ ತಿರುಗೇಟು ನೀಡಿದ್ದಾರೆ. ಇದೇ ವೇಳೆ ದೇವೇಗೌಡರಿಗೆ ಮೂರು ಪ್ರಶ್ನೆಗಳನ್ನು ಹಾಕಿದ್ದು ಉತ್ತರ ನೀಡುವಂತೆ ಆಗ್ರಹಿಸಿದ್ದಾರೆ.

  1. ಹುಬ್ಬಳ್ಳಿಯಲ್ಲಿ ಲಿಂಗಾಯತ ಸಿಎಂಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ಏನು ಅಂತ ಕೇಳಿದವರು ಯಾರು?
  2.  ಚನ್ನಪಟ್ಟಣದಲ್ಲಿ ಜಾತಿ ಮತ್ತು ಹಣದ ಆಮಿಷಕ್ಕೆ ಬಲಿಯಾಗಿ ಮತಹಾಕಿದ್ರಿ ಅಂತ ಹೇಳಿದವರು ಯಾರು?
  3.  ಉತ್ತರ ಕರ್ನಾಟಕದಿಂದ ರಾಜ್ಯಕ್ಕೆ ಬರುವ ಆದಾಯ ಏನು ಅಂತ ಕೇಳ್ದವರು ಕುಮಾರಸ್ವಾಮಿ ತಾನೇ?

ಈ ಎಲ್ಲ ಪ್ರಶ್ನೆಗಳಿಗೆ ದೇವೇಗೌಡರು ಉತ್ತರ ನೀಡಬೇಕು, ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಬೇಜವಾಬ್ದಾರಿ ಹೇಳಿಕೆಯಿಂದ ಉತ್ತರ ಕರ್ನಾಟಕ ಹೊತ್ತಿ ಉರಿಯುತ್ತಿದೆ ಎಂದು ಕಿಡಿಕಾರಿದ್ದಾರೆ. ಮಗ ಮಾಡಿದ ತಪ್ಪನ್ನು ತಿದ್ದಿಕೊಳ್ಳಲು ಹೇಳೋದು ಬಿಟ್ಟು ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನಾನು ವಿರೋಧ ಪಕ್ಷದ ನಾಯಕನಾಗಿ ಸಮರ್ಪಕ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದರು.

 

 


ಸಂಬಂಧಿತ ಟ್ಯಾಗ್ಗಳು

H.D.deve gowda B.S.Yeddyurappa ಉತ್ತರ ಜವಾಬ್ದಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ