ಫ್ಲೆಕ್ಸ್ ತೆರವು: ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದವರ ಬಂಧನ

police arrested 2 who attacked on the officer

03-08-2018

ಬೆಂಗಳೂರು: ಮಹದೇವಪುರ ವಲಯದ ಟಿನ್ ಫ್ಯಾಕ್ಟರಿ ಬಳಿ ಫ್ಲೆಕ್ಸ್ ಹಾಗೂ ಬ್ಯಾನರ್ ತೆರವು ಮಾಡುತ್ತಿದ್ದ ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ನಾಲ್ವರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಟಿನ್ ಫ್ಯಾಕ್ಟರಿ ಸಮೀಪದ ಉದಯನಗರದ ರಾಜೇಂದ್ರ, ಸಿಮ್ಸನ್, ಕಮಲನಾಥ್, ಸೂರ್ಯ ಬಂಧಿತ ಆರೋಪಿಗಳಾಗಿದ್ದಾರೆ. ಹೈಕೋರ್ಟ್ ಆದೇಶದಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಆಯುಕ್ತರು ಎಲ್ಲ ಸಿಬ್ಬಂದಿಗೆ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ತೆರವು ಮಾಡುವಂತೆ ಆದೇಶ ನೀಡಿದ್ದರು.

ಗುರುವಾರ ಬಿಬಿಎಂಪಿ ಸಿಬ್ಬಂದಿ ಫ್ಲೆಕ್ಸ್ ಹಾಗೂ ಬ್ಯಾನರ್ ತೆರವು ಕಾರ್ಯ ಮುಂದುವರಿಸಿದ್ದರು. ಟಿನ್ ಫ್ಯಾಕ್ಟರಿ ಬಳಿ ಹಾಕಲಾಗಿದ್ದ ಫ್ಲೆಕ್ಸ್ ಹಾಗೂ ಬ್ಯಾನರ್‍ ಗಳನ್ನು ತೆಗೆಯುತ್ತಿದ್ದಾಗ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಹೆಚ್.ಎ.ಎಲ್ ಸಹಾಯಕ ಕಂದಾಯ ಅಧಿಕಾರಿ ಭಟ್ಟಾಚಾರ್ಯ ಅವರ ಮೇಲೆ ಹಲ್ಲೆ ಮಾಡಿ, ಆರೋಪಿಗಳು ಪರಾರಿಯಾಗಿದ್ದರು. ಅಧಿಕಾರಿ ಭಟ್ಟಾಚಾರ್ಯ ಅವರು ನಿನ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಶುಕ್ರವಾರ ನಾಲ್ವರು ಸಿಕ್ಕಿದ್ದು, ಪರಾರಿಯಾಗಿರುವ ಸಂತೋಷ್, ಸರವಣ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

High Court Banners ಬಿಬಿಎಂಪಿ ಫ್ಲೆಕ್ಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ