ಮಾನವ ಹಕ್ಕುಗಳ ರಕ್ಷಣೆ: ರಾಜ್ಯದ ಬಗ್ಗೆ ಹೆಚ್.ಎಲ್.ದತ್ತು ಮೆಚ್ಚುಗೆ

Human Rights Protection: H.L.Dattu Appreciation about the state

03-08-2018

ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಾಧೀಶರಾದ ಹೆಚ್.ಎಲ್.ದತ್ತು ಅವರು, ಇಂದು ವಿಕಾಸಸೌಧದಲ್ಲಿ  ಸಭೆ ನಡೆಸಿದ್ದಾರೆ. ಮಾನವ ಹಕ್ಕುಗಳ ಕಾರ್ಯಕರ್ತರು, ಸ್ವಯಂಸೇವಾ ಸಂಸ್ಥೆಗಳು, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಇಂದಿನ ಸಭೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ವಿಚಾರಣೆಯ ಸ್ಥಿತಿಗತಿ ಕುರಿತು ವಿಚಾರಣೆ ನಡೆಸಲಾಯಿತು. ನಿನ್ನೆಯಿಂದ 175 ಪ್ರಕರಣಗಳ ವಿಚಾರಣೆ ನಡೆಸಲಾಯಿತು. ಸೂಕ್ತ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧದ ಪ್ರಕರಣಗಳು, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು, ಅಮಾಯಕರ ಮೇಲೆ ಎಫ್ಐಆರ್ ಹಾಕಿದ್ದಾರೆನ್ನಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದ್ದೇವೆ. ಹಲವು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.

ಮಾನವ ಹಕ್ಕುಗಳ ರಕ್ಷಣೆಗೆ ಕರ್ನಾಟಕದಲ್ಲಿ ಒಳ್ಳೆಯ ಪ್ರಯತ್ನಗಳು ನಡೆಯುತ್ತಿವೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ಈ ಪ್ರಯತ್ನಗಳು ನಮಗೆ ಸಂತೋಷ ತಂದಿವೆ ಎಂದರು. ನಕಲಿ ಮಾನವ ಹಕ್ಕುಗಳ ಸಂಘಟನೆಗಳ ಹಾವಳಿ ವಿಚಾರದ ಕುರಿತು, ಇಂಥಹ ಮಾನವ ಹಕ್ಕುಗಳ ಸಂಘಟನೆಗಳನ್ನು ಏನೂ ಮಾಡಕ್ಕಾಗಲ್ಲ, ಇಂಥಹವರ ವಿರುದ್ಧ ಕ್ರಮ ಜರುಗಿಸುವ ಅಧಿಕಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಇಲ್ಲ. ಇಂಥವರಿಂದ ವಂಚನೆ ಪ್ರಕರಣಗಳು ಗಮನಕ್ಕೆ ಬಂದರೆ ಪೊಲೀಸರಿಗೆ ದೂರು ಕೊಡಬೇಕಷ್ಟೇ ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ