ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಣಿ ಸಭೆ

Congress Working Committee meeting at Delhi

04-08-2018

ನವದೆಹಲಿ: ದೆಹಲಿಯಲ್ಲಿ ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ‌ ಕಚೇರಿಯಲ್ಲಿ ಸಭೆ ಆರಂಭಾಗಿದ್ದು, ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್.ಮುನಿಯಪ್ಪ, ಇನ್ನಿತರ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಯುತ್ತಿದ್ದು, ನಿರುದ್ಯೋಗ, ಬೆಲೆ ಏರಿಕೆ ವಿಷಯ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚುನಾವಣಾ ತಂತ್ರಗಾರಿಕೆ ಮತ್ತು ಮೈತ್ರಿ ಬಗ್ಗೆಯೂ ಸಮಾಲೋಚನೆ ನಡೆಯಲಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

AICC Rahul Gandhi ಕಾರ್ಯಕಾರಣಿ ಲೋಕಸಭಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ