ರಾಜ್ಯ ಸರ್ಕಾರದ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

04-08-2018
ಶಿವಮೊಗ್ಗ: ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆರಂಭದಲ್ಲೇ ಕುಸಿತ ಕಂಡಿದೆ ಎಂದು, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ರೈತರಿಗಾಗಿ ಇಟ್ಟಿರುವ ಹಣ ಯಾವುದಕ್ಕೂ ಸಾಲುವುದಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳನ್ನ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ, ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠನಾಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಲ್ಲಿಯವರೆಗೆ ಶೇ 3% ರಷ್ಟು ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿ ಕಂಡಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಹಣವನ್ನಾದರೂ ರಾಜ್ಯ ಸರ್ಕಾರ ಖರ್ಚು ಮಾಡಬೇಕು ಎಂದರು.
ಮುಖ್ಯಮಂತ್ರಿಗಳು ಆಡಳಿತ ವೈಫಲ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಬಡವರಿಗಾಗಿ ಘೋಷಣೆ ಮಾಡಿರುವಂತಹ ಯೋಜನೆಗಳನ್ನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿದ್ದಾರೆ.
ಸಿಎಂ ಕುಮಾರಸ್ವಾಮಿಯವರು ಯಾರನ್ನು ನಂಬಿಕೊಂಡು ಆಡಳಿತ ನಡೆಸುತ್ತಿದ್ದಾರೆ? ಎಂಬುವುದನ್ನ ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇನ್ನೂ ಶೇ 50 ರಷ್ಟು ಆರಂಭಗೊಂಡಿಲ್ಲ. ಈ ವಿಚಾರವಾಗಿ ಸದನದಲ್ಲಿ ಚರ್ಚೆಯಾಗಿದೆ. ಜಂಟಿ ಸದನ ಸಮಿತಿ ರಚಿಸಿ ಭ್ರಷ್ಟಾಚಾರದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ