ಪಂಚಾಯತಿ ಅಧ್ಯಕ್ಷ-ಸದಸ್ಯರನ್ನು ಕೂಡಿ ಹಾಕಿದ ಗ್ರಾಮಸ್ಥರು

panchayath office locked by the villagers and protested

06-08-2018

ಗದಗ: ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮ ಪಂಚಾಯತಿ ಅಧಕ್ಷ ಹಾಗೂ ಉಪಾಧ್ಯಕ್ಷ ಸೇರಿ ಸದಸ್ಯರನ್ನು ಕೂಡಿ ಹಾಕಿರುವ ಗ್ರಾಮಸ್ಥರು, ಈ ರೀತಿಯಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ. ಅಷ್ಟಕ್ಕೂ ಘಟನೆಗೆ ಕಾರಣವೇನೆಂದರೆ ಕುಡಿಯುವ ನೀರು. ಹೌದು ಹೀಗೊಂದು ಘಟನೆ ನಡೆದಿರುವುದು ಗದಗ್ ನ ಗಜೇಂದ್ರಗಡದ ಲಕ್ಕಲಕಟ್ಟಿ ಗ್ರಾಮದಲ್ಲಿ.

ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಪಂಚಾಯತಿ ಕಚೇರಿಯಲ್ಲಿಯೇ ಕೂಡಿ ಹಾಕಿ, ಕಚೇರಿಗೆ ಬೀಗ ಜಡಿದಿದ್ದಾರೆ. ನಂತರದಲ್ಲಿ ಪಂಚಾಯತಿ ಕಚೇರಿ ಎದುರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರು ಪೂರೈಸದ ಹಿನ್ನೆಲೆ, ಗ್ರಾಮಸ್ಥರು ಈ ರೀತಿ ಮಾಡಿದ್ದಾರೆ. ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು ಹಿಡಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

gram panchayat protest ಕುಡಿಯುವ ಉಪಾಧ್ಯಕ್ಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ