ಇತರೆ ಇಲಾಖೆಗಳ ವರ್ಗಾವಣೆಯಲ್ಲಿ ಮೂಗು ತೂರಿಸಿಲ್ಲ: ರೇವಣ್ಣ

I did not interfere with other departments: h.d.Revanna

06-08-2018

ಹಾಸನ: ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದ್ದಾರೆಂಬ ಬಿ.ಎಸ್.ಯಡಿಯೂರಪ್ಪನವರ ಆರೋಪ ಹಿನ್ನೆಲೆ, ಈ ಕುರಿತು ಪ್ರತಿಕ್ರಿಯಿಸಿದ ರೇವಣ್ಣ, ‘ನಾನು ಯಾವುದೇ ಇಲಾಖೆಗಳ ವರ್ಗಾವಣೆಯಲ್ಲಿ ಮೂಗು ತೂರಿಸಿಲ್ಲ. ನನ್ನ ಇಲಾಖೆ ಮತ್ತು ಹಾಸನ ಜಿಲ್ಲೆಯಲ್ಲಿ ಮಾತ್ರ ವರ್ಗಾವಣೆ ಮಾಡಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಕಾದರೆ ಯಡಿಯೂರಪ್ಪರವರು ಕಡತಗಳನ್ನ ತೆಗೆದು ನೋಡಲಿ ಎಂದು ಸವಾಲು ಹಾಕಿದ್ದಾರೆ. ಯಡಿಯೂರಪ್ಪನವರ ಆರೋಪ ನಿರಾಧಾರ ಎಂದಿದ್ದಾರೆ.

ಯಡಿಯೂರಪ್ಪ ಮಾಧ್ಯಮಗಳಲ್ಲಿ ಮಾತನಾಡುವುದನ್ನು ಬಿಟ್ಟು ಸಿಎಂ ಜೊತೆ ಮಾತುಕತೆ ನಡೆಸಲಿ. ಯಡಿಯೂರಪ್ಪರ ಮತ್ತು ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಮೊದಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 6 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಆಲೂಗಡ್ಡೆಗೆ ಪರಿಹಾರಕ್ಕಾಗಿ, ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದು, ಆಲೂಗಡ್ಡೆ ಬಿತ್ತನೆ ಬೀಜಕ್ಕೆ 100ರಷ್ಟು ಸಬ್ಸಿಡಿ ನೀಡಲು ತೀರ್ಮಾನಿಸುತ್ತೇವೆ. ನೂತನವಾಗಿ ಆಲೂಗಡ್ಡೆ ಸಂಶೋಧನಾ ಕೇಂದ್ರ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

H.D.Revanna potato crop ಸರ್ಕಾರ ಹೆಕ್ಟೇರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ