ದೇವದುರ್ಗ: ತಾಲ್ಲೂಕು ಕಚೇರಿಯಲ್ಲಿ ಅಗ್ನಿ ಅವಘಡ

fire at devadurga taluk office

07-08-2018

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕು ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿ ವಿತರಿಸುವ 8ನೇ ಕೊಠಡಿಯಲ್ಲಿ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿ ಅವಘಡದಲ್ಲಿ ದಾಖಲೆಗಳು, ಕಂಪ್ಯೂಟರ್ ಸುಟ್ಟು ಭಸ್ಮವಾಗಿವೆ. ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Taluk office fire ಕಂಪ್ಯೂಟರ್ ಅವಘಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ