ಬಿಜೆಪಿ ನಾಯಕರಿಗೆ ಡಿಸಿಎಂ ತಿರುಗೇಟು

DCM parameshwar reaction on strike

07-08-2018

ಬೆಂಗಳೂರು: ಕೇಂದ್ರ ಸರಕಾರದ ಹೊಸ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ರಾಷ್ಟ್ರವ್ಯಾಪಿ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಹಲವೆಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಪರಮೇಶ್ವರ್, ಸಾರಿಗೆ ನೌಕರರಿಗೆ ಕೆಲವು ಸಮಸ್ಯೆಗಳು ಎದುರಾಗಿರುವುದರಿಂದ ಬಂದ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇದರ ಪ್ರಭಾವ ಇಲ್ಲ. ರಾಜ್ಯದಲ್ಲಿ ಬಂದ್ ಪರಿಣಾಮ ಬೀರಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಮೂವರು ಸಿಎಂಗಳು ಇದ್ದಾರೆಂಬ ಬಿಜೆಪಿ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಸಮ್ಮಿಶ್ರ ಸರ್ಕಾರದ ಕೆಲಸಗಳನ್ನ ಸಹಿಸೋದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಏನೇನೊ ಮಾತನಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ವರ್ಗಾವಣೆಯಲ್ಲಿ ರೇವಣ್ಣ ಹಸ್ತಕ್ಷೇಪ ವಿಚಾರ ಕುರಿತು, ಬಿಜೆಪಿ ಕಾಲದಲ್ಲಿ ಏನೇನಾಗಿದೆ ಅಂತ ಗೊತ್ತಿದೆ. ಈಗ ಅವರು ನಮ್ಮ ಮೇಲೆ ಮಾತನಾಡುತ್ತಿದ್ದಾರಷ್ಟೆ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ತಿರುಗೇಟು ಕೊಟ್ಟಿದ್ದಾರೆ.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ‘ಮಾಧ್ಯಮಗಳಿಗೆ ಹೇಳಿಯೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

G. Parameshwara Tweet ಮಾಧ್ಯಮ ರಾಷ್ಟ್ರವ್ಯಾಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ