ಪಾರ್ವತಮ್ಮ ರಾಜ್‌ಕುಮಾರ್‌ ವಿಧಿವಶ !

Kannada News

31-05-2017

ಬೆಂಗಳೂರು:- ಡಾ.ರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಅವರು ಕೆಲ ದಿನಗಳ ಹಿಂದೆ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ. ಸಂಜೆ ಕಂಠೀರವ ಸ್ಟುಡಿಯೊದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಪಾರ್ವತಮ್ಮ ರಾಜ್ ಕುಮಾರ್ ಆವರು 1939ರಲ್ಲಿ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಜನಿಸಿದ್ದರು. 1953ರಲ್ಲಿ ರಾಜ್‌ಕುಮಾರ್‌ ಅವರೊಂದಿಗೆ ಪಾರ್ವತಮ್ಮ ಅವರ ವಿವಾಹವಾಗಿತ್ತು. ವಜ್ರೇಶ್ವರಿ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಅವರು ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ಪಾರ್ವತಮ್ಮ ರಾಜ್ ಕುಮಾರ್  ಅವರ ನಿಧನದಿಂದ ಕುಟುಂಬ ಹಾಗು ಆಪ್ತ ವಲಯದಲ್ಲಿ ತೀವ್ರ ಶೋಕ ಮಡುಗಟ್ಟಿದೆ. 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ