ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅಸ್ತಂಗತ…

DMK chief Karunanidhi passes away

08-08-2018

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ನಿನ್ನೆ ಸಂಜೆ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವಯಸ್ಸಾಗಿತ್ತು. ಮೂತ್ರನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ನಿಧನರಾಗಿದ್ದಾರೆ. ನಿನ್ನೆ ರಾತ್ರಿಯೇ ಅವರ ಪಾರ್ಥೀವ ಶರೀರವನ್ನು ಚೆನ್ನೈನ  ಗೋಪಾಲಪುರಂಗೆ ತರಲಾಗಿತ್ತು ಇದೀಗ ರಾಜಾಜಿ ಹಾಲ್ ನಲ್ಲಿ, ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ದೆಹಲಿ ಸೇರಿದಂತೆ ದೇಶದ ಎಲ್ಲ ರಾಜ್ಯ ರಾಜಧಾನಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಭಾರತ ಸರ್ಕಾರ ಸೂಚನೆ ನೀಡಿದೆ. ತಮಿಳುನಾಡಿನಾದ್ಯಂತ ಶೋಕಾಚರಣೆ ಮಾಡುತ್ತಿದ್ದು, ಅಪಾರ ಅಭಿಮಾನಿಗಳು ರಾಜಾಜಿಹಾಲ್ ನತ್ತ ಧಾವಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅಂತ್ಯಕ್ರಿಯೆಗೆ ಜಾಗದ ಕುರಿತು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.


ಸಂಬಂಧಿತ ಟ್ಯಾಗ್ಗಳು

M. Karunanidhi channai ಆಸ್ಪತ್ರೆ ಅಭಿಮಾನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ