ಚಾಮರಾಜನಗರ-ತಮಿಳುನಾಡು ಗಡಿಭಾಗದಲ್ಲಿ ಬಿಗಿ ಭದ್ರತೆ

08-08-2018
ಚಾಮರಾಜನಗರ: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶ ಹಿನ್ನೆಲೆ, ಚಾಮರಾಜನಗರ-ತಮಿಳುನಾಡು ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಚಾಮರಾಜನಗರ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಚಾಮರಾಜನಗರದಿಂದ ತಮಿಳುನಾಡಿಗೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಖಾಸಗಿ ಬಸ್ ಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿಲಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಬಸ್ ಗಳು ನಿಂತಲ್ಲೇ ನಿಂತಿವೆ.
ಒಂದು ಕಮೆಂಟನ್ನು ಹಾಕಿ