ಕರುಣಾನಿಧಿಗೆ ಪ್ರಧಾನಿ ಅಂತಿಮ ನಮನ

PM Modi

08-08-2018

ಚೆನ್ನೈ: ನಿನ್ನೆ ನಿಧನರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗು ಡಿಎಂಕೆ ಧುರೀಣ ಕರುಣಾನಿಧಿ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

ಕರುಣಾನಿಧಿ ಅವರ ನಿಧನದ ಹಿನ್ನೆಲೆ ಸಂಸತ್ ನ ಅಧಿವೇಶನವನ್ನು ನಾಳೆಗೆ ಮುಂದೂಡಲಾಗಿದೆ. ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನ ಅಣ್ಣಾ ಮೆಮೋರಿಯಲ್ ನಲ್ಲಿ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ.

ದಿವಂಗತ ಕರುಣಾನಿದಿ ಅವರು 13 ಬಾರಿ ಎಂಎಲ್ಎ 5 ಬಾರಿ ಮುಖ್ಯಮಂತ್ರಿಯಾಗಿದ್ದರು. ‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ. ಹಲವು ಬಾರಿ ಶ್ರೀ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೆ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಕರಿಸುತ್ತಿವೆ. ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಮ್ಮಿಶ್ರ ಸರ್ಕಾರದ ರಚನೆಗೆ ಕರುಣಾನಿಧಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿಧ್ವನಿ ನೀಡಿದ ಕರುಣಾನಿಧಿ ಅವರ ರಾಜಕೀಯ ಸಿದ್ಧಾಂತ ನಮಗೆಲ್ಲರಿಗೂ ಮಾದರಿ. ಅವರ ನಿಧನದಿಂದ ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ. ತಮಿಳುನಾಡು ಒಬ್ಬ ದಾರ್ಶನಿಕ ನಾಯಕನನ್ನು ಕಳೆದುಕೊಂಡಿದೆ” ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

M. Karunanidhi Narendra Modi ನಾಯಕ ಚಿತ್ರರಂಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ