ನಾನು ನನ್ನ ಹಿರಿಯಣ್ಣನನ್ನು ಕಳೆದುಕೊಂಡಿದ್ದೀನಿ: ಹೆಚ್.ಡಿ.ದೇವೇಗೌಡ

H.D.deve gowda condolence to karunanidhi death

08-08-2018

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಇಡೀ ದೇಶವು ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ.

‘ನಾನು ಕರುಣಾನಿಧಿ ಅವರನ್ನು ಸುಮಾರು 5 ದಶಕಗಳಿಂದ ಬಹಳ ಹತ್ತಿರದಿಂದ ಬಲ್ಲೆ. ಈ ದಿನ ನಾನು ನನ್ನ ಹಿರಿಯ ಅಣ್ಣನನ್ನು ಕಳೆದುಕೊಂಡಿದ್ದೀನಿ. ನಾನು ಪ್ರಧಾನ ಮಂತ್ರಿ ಆಗಬೇಕಾದರೆ ಕರುಣಾನಿಧಿ ಅವರ ಪಾತ್ರ ಬಹಳ ದೊಡ್ಡದು ಎಂದು ಸ್ಮರಿಸಿದ್ದಾರೆ. ಇಂದು ಇಡಿ ದೇಶಕ್ಕೆ ಮತ್ತು ವಯಕ್ತಿಕವಾಗಿ ನನಗೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುವೆ' ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Deve Gowda M. Karunanidhi ಕುಟುಂಬ ಆಘಾತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ