'ಆಪರೇಶನ್ ಕಮಲ'ದ ಅಗತ್ಯ ನಮಗಿಲ್ಲ: ಬಿಎಸ್ವೈ

we don

08-08-2018

ಬೆಂಗಳೂರು: ‘ನಾಳೆಯಿಂದ ಬೀದರ್ ಜಿಲ್ಲೆಯಿಂದ ಪ್ರವಾಸ ಆರಂಭಿಸುತ್ತೇನೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಪ್ರವಾಸದ ವೇಳೆ ಇದೆಲ್ಲವನ್ನೂ ಅವಲೋಕಿಸುತ್ತೇವೆ ಎಂದು ಹೇಳಿದರು.

ಇನ್ನು ಸಚಿವ ಡಿ.ಕೆ.ಶಿವಕುಮಾರ್ ಮಾಡಿರುವ ಆಪರೇಶನ್ ಕಮಲ ಆರೋಪದ ಕುರಿತು, ಇದು ಅರ್ಥಹೀನ ಆರೋಪ ಎಂದರು. ನಾವು ವಿರೋಧ ಪಕ್ಷದಲ್ಲಿ ಇರಬೇಕು ಎಂದು ಜನ ತೀರ್ಮಾನ ಮಾಡಿದ್ದಾರೆ. ಗೌರವಯುತವಾಗಿ ವಿರೋಧ ಪಕ್ಷದಲ್ಲೇ ಇರ್ತೀವಿ. ಆಪರೇಶನ್ ಕಮಲದ ಅಗತ್ಯ ನಮಗಿಲ್ಲ ಎಂದಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅದ್ಯಕ್ಷ ಅಮಿತ್ ಷಾ ಸೇರಿದಂತೆ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಬಂದಿದ್ದೇನೆ, ನಮ್ಮ ರಾಜ್ಯಕ್ಕೆ ಆಗಬೇಕಿರುವ  ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತಾಡಿದ್ದೇನೆ. ರಾಜ್ಯದ ಪ್ರಸಕ್ತ ವಿದ್ಯಮಾನಗಳು ಹಾಗೂ ಮುಂದೆ ಇಡಬೇಕಾದ ಹೆಜ್ಜೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಕೂಡ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ