ಯುಪಿಎ ಸರ್ಕಾರದೊಂದಿಗೆ ನಿಂತರವರು ಕರುಣಾನಿಧಿ: ಪರಮೇಶ್ವರ್

karunanidhi supported UPA government -1 and 2 in central: G. Parameshwara

08-08-2018

ಬೆಂಗಳೂರು: ತಮಿಳುನಾಡು ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಕರುಣಾನಿಧಿ ಅವರ ನಿಧನ ರಾಜಕಾರಣದಲ್ಲಿ ತುಂಬಲಾರದ ನಷ್ಟ ಉಂಟು ಮಾಡಿದ್ದು, ಅವರ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರ 18ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಸಮರ್ಪಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು‌. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಯುಪಿಎ ಎರಡು ಬಾರಿ ಕೇಂದ್ರದಲ್ಲಿ ಸರ್ಕಾರ ರಚಿಸಿದಾಗ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ಕಾಂಗ್ರೆಸ್ ಪರ ನಿಂತಿದ್ದಕ್ಕೆ ನಾವೆಲ್ಲಾ ಕರುಣಾನಿಧಿ ಅವರಿಗೆ ಆಭಾರಿಯಾಗಿದ್ದೇವೆ. ಈಗಲೂ ಡಿಎಂಕೆ ಪಕ್ಷ ಕಾಂಗ್ರೆಸ್ ಜೊತೆಗಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ