ಫ್ಲೆಕ್ಸ್-ಬ್ಯಾನರ್: ಬಿಬಿಎಂಪಿಗೆ ಹೈಕೋರ್ಟ್ ತಾಕೀತು

Flex-banner: High Court orders to BBMP

08-08-2018

ಬೆಂಗಳೂರು: ಬೆಂಗಳೂರು ಮಹಾನಗರ ಫ್ಲೆಕ್ಸ್, ಬ್ಯಾನರ್ ಮತ್ತು ಅನ್ಯ ಜಾಹೀರಾತು ಫಲಕಗಳ ಅವ್ಯವಸ್ಥಿತ ಜಾಲದಲ್ಲಿ ಸಿಲುಕಿದ್ದು, ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆ 2016ರ ಜಾಹೀರಾತು ನೀತಿಯನ್ನು ತಕ್ಷಣ ಜಾರಿಗೆ ತರುವತ್ತ ಗಮನ ಹರಿಸಬೇಕು ಎಂದು ರಾಜ್ಯ ಉಚ್ಚ ನ್ಯಾಯಾಲಯ ತಾಕೀತು ಮಾಡಿದೆ. ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ.


ಸಂಬಂಧಿತ ಟ್ಯಾಗ್ಗಳು

BBMP Flex ನ್ಯಾಯಮೂರ್ತಿ ಅರ್ಜಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ