ಅಫಜಲಪುರ ಪುರಸಭೆ ಚುನಾವಣೆಗೆ ತಡೆಯಾಜ್ಞೆ!

Afzalpur Municipal Elections!

09-08-2018

ಕಲಬುರಗಿ: ಜಿಲ್ಲೆಯ ಅಫಜಲಪುರ ಪುರಸಭೆ ಚುನಾವಣೆಗೆ ಕಲಬುರ್ಗಿ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅವಧಿಗೆ ಮುಂಚಿತವಾಗಿಯೇ ಚುನಾವಣೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ದಾಖಲಾಗಿದ್ದ ದೂರನ್ನು ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಸತ್ಯನಾರಾಯಣ ಅವರಿದ್ದ ಪೀಠ ತಡೆಯಾಜ್ಞೆ ನೀಡಿದೆ. ಅಫಜಲಪುರದ ಜೊತೆಗೆ ಗುರುಮಠಕಲ್ ಪಟ್ಟಣ ಪಂಚಾಯಿತಿ ಸೇರಿ ಪೀಠದ ವ್ಯಾಪ್ತಿಯಲ್ಲಿ ಬರುವ ಅವಧಿಗೆ ಪೂರ್ವದಲ್ಲಿ ಚುನಾವಣೆ ಘೋಷಣೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.


ಸಂಬಂಧಿತ ಟ್ಯಾಗ್ಗಳು

Afzalpur Election ಪುರಸಭೆ ಕೋರ್ಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ