ಮಂತ್ರಿಗಳು ವರ್ಗಾವಣೆಯ ಕಮೀಷನ್ ಏಜೆಂಟ್ಗಳಾಗಿದ್ದಾರೆ: ಈಶ್ವರಪ್ಪ

09-08-2018
ಮೈಸೂರು: ‘ರಾಜ್ಯದ ಇತಿಹಾಸದಲ್ಲೇ ವರ್ಗಾವಣೆಯಲ್ಲಿ ಇಷ್ಟೊಂದು ಭ್ರಷ್ಟಾಚಾರ ಆಗಿಲ್ಲ. ಮಂತ್ರಿಗಳು ವರ್ಗಾವಣೆಯ ಕಮೀಷನ್ ಏಜೆಂಟ್ ಗಳಾಗಿದ್ದಾರೆ’ ಎಂದು ಬಿಜೆಪಿ ಮುಖಂಡ ಹಾಗು ಶಾಸಕ ಕೆ.ಎಸ್.ಈಶ್ವರಪ್ಪ ಈ ಹೇಳಿಕೆ ನೀಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಈಶ್ವರಪ್ಪ, ’ಚಾಮುಂಡಿ ಸನ್ನಿಧಾದಲ್ಲಿ ನಿಂತು ನಾನು ಈ ಮಾತನ್ನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಸಿಎಂ ಕಣ್ಮುಚ್ಚಿ ಕುಳಿತು ಕೊಂಡಿರುವುದು ಒಳ್ಳೆಯದಲ್ಲ. ಎಲ್ಲಾ ಹಂತದ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೆ ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕದಲ್ಲಿದ್ದಾರೆ’ ಎಂದರು.
‘ನಾವಾಗಿ ನಾವು ಕಾಂಗ್ರೆಸ್ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ಕರೆಯಲ್ಲ. ಬಿಜೆಪಿ ಕರೆದ ಕೂಡಲೇ ನಮ್ಮ ಜೊತೆ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾ? ನಮ್ಮ ಒಬ್ಬ ಶಾಸರಕರನ್ನು ಮುಟ್ಟಿ ನೋಡೋಣಾ. ಬಿಜೆಪಿಯವರು ಸಿಂಹ ರೂಪದ ಶಾಸಕರು. ಆದರೆ ಅವರ(ಸಮ್ಮಿಶ್ರ ಸರ್ಕಾರದ) ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೇ ನಂಬಿಕೆ ಇಲ್ಲ. ಇಂಥಹ ಸರಕಾರ ಉಳಿಯುತ್ತಾ? ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.
ಒಂದು ಕಮೆಂಟನ್ನು ಹಾಕಿ