ಪ್ರಧಾನಿ ಮೋದಿ ವಿರುದ್ಧ ಹೋರಾಟಗಾರ್ತಿ ಕೆ.ನೀಲಾ ಗುಡುಗು!

social activist k.neela

09-08-2018

ಧಾರವಾಡ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರದ ನಿಲುವುಗಳನ್ನು ಖಂಡಿಸಿ, ಹಾಗೂ ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ಸಂಘಟನೆ ನೇತೃತ್ವದಲ್ಲಿ  ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೂ ಯತ್ನಿಸಿದ್ದಾರೆ. ಪ್ರತಿಭಟನೆ ವೇಳೆ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಪ್ರಗತಿಪರ ಹೋರಾಟಗಾರ್ತಿ ಕೆ.ನೀಲಾ ‘ಹಿಟ್ಲರ್ ಸಂಸ್ಕೃತಿ ಅನುಸರಿಸುತ್ತಿರುವ ಮೋದಿಯಿಂದ ದೇಶಕ್ಕೆ ಒಳ್ಳೆಯದಾಗಿಲ್ಲ’ ಎಂದು ಗುಡುಗಿದ್ದಾರೆ. ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿ ಮಾಡಿದಂತೆ ಮೋದಿ ವಿರುದ್ಧವೂ ದೇಶ ಬಿಟ್ಟು ತೊಲಗಿ ಎಂದು ಇಂದಿನಿಂದ ಚಳವಳಿ ಆರಂಭಿಸುತ್ತಿರುವುದಾಗಿ ಅವರು ಹೇಳಿದರು. ಮೋದಿ ಈ ದೇಶ ಬಿಟ್ಟು ತೊಲಗುವವರೆಗೂ ಈ ಚಳವಳಿ ನಿರಂತರ ಎಂದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ