ಅಫಜಲಪುರ-ಗುರುಮಠಕಲ್ ಸ್ಥಳೀಯ ಸಂಸ್ಥೆ ಚುನಾವಣೆ ಯಥಾ ಸ್ಥಿತಿ

local bodies afzalpur and gurmitkal election are as usual: said court

10-08-2018 210

ಕಲಬುರಗಿ: ಜಿಲ್ಲೆಯ ಅಫಜಲಪುರ, ಕಲಬುರಗಿ ಪುರಸಭೆ, ಗುರುಮಠಕಲ್ ಪಟ್ಟಣ ಪಂಚಾಯ್ತಿ ಚುನಾವಣೆಗೆ ತಡೆಯಾಜ್ಞೆಯನ್ನು ತೆರವುಗೊಳಿಸಿ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಅವಧಿಗೆ ಮುನ್ನವೇ ಚುನಾವಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಅಫಜಲಪುರ ಪುರಸಭೆ ಜನಪ್ರತಿನಿಧಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆಯಷ್ಟೇ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಇದೀಗ ಮತ್ತೊಮ್ಮೆ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪನ್ನು ನೀಡಿದೆ. ಪಟ್ಟಣ ಪಂಚಾಯ್ತಿಯನ್ನು ಪುರಸಭೆ ಎಂದು ಮೇಲ್ದರ್ಜೆಗೆ ಏರಿಸಿರುವುದರಿಂದ ಚುನಾವಣೆ ಅನಿವಾರ್ಯ ಎಂದು ರಾಜ್ಯ ಚುನಾವಣಾ ಆಯೋಗ ವಾದ ಮಂಡಿಸಿತ್ತು. ವಾದ-ಪ್ರತಿವಾದ ನಡುವೆ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ. ಆದ್ದರಿಂದ ಅಫಜಲಪುರ ಪುರಸಭೆ, ಗುರುಮಠಕಲ್ ಪಟ್ಟಣ ಪಂಚಾಯ್ತಿ ಮತ್ತಿತರ ಪುರಸಭೆಗಳ ಚುನಾವಣೆ ಯಥಾ ರೀತಿ ನಡೆಯಲಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ