ಮಲೆನಾಡು-ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ

Heavy rains in malnad andakarawali

11-08-2018

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ತಲೆ ದೋರಿದೆ. ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ನದಿಗೆ ಭಾರೀ ನೀರು ಹರಿದು ಬರುತ್ತಿದೆ. ನದಿ ಪಾತ್ರದಲ್ಲಿ ಬರುವ ನಂಜನಗೂಡು ದೇವಸ್ಥಾನದ ಸ್ನಾನಘಟ್ಟ ಮುಳುಗಿದೆ. ಕೆಳ ದಂಡೆ ಭಾಗದಲ್ಲಿನ ಕಲ್ಲಿನ ಘಟ್ಟಗಳು ಜಲಾವೃತಗೊಂಡಿವೆ.

ಅದಲ್ಲದೆ ಮಲೆನಾಡಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿದೆ ಮಳೆ. ಭದ್ರಾ, ತುಂಗಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಇನ್ನು ಕೇರಳ ಸರ್ಕಾರದ ಮನವಿಯ ಮೇರೆಗೆ ಕಬಿನಿ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು. ಈ ಮಧ್ಯೆ, ರಾಜ್ಯದ ಕರಾವಳಿಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ.


ಸಂಬಂಧಿತ ಟ್ಯಾಗ್ಗಳು

Chikmagalur heavy rain ಹೇಮಾವತಿ ಮೈದುಂಬಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ