ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ

Mini bus palti: 26 injured

11-08-2018

ಚಾಮರಾಜನಗರ: ಮಲೆ ಮಹದೇಶ್ವರಬೆಟ್ಟಕ್ಕೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಬಳಿ ಘಟನೆ ನಡೆದಿದ್ದು, ಸುಮಾರು 26 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಇಬ್ಬರ ಕೈತುಂಡಾಗಿದೆ. ಪ್ರಯಾಣಿಕರಾಗಿದ್ದ ಮಹಿಳಯೊಬ್ಬರು ಹಾಗು ಬಸ್ ಚಾಲಕನ ಕೈ ತುಂಡಾಗಿದೆ. ತೀವ್ರ ನೋವಿನಿಂದ ನರಳುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬೆಳಕವಾಡಿ ತಾಲ್ಲೂಕಿನ ಬಿಜಿಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ಸಂಬಂಧಿತ ಟ್ಯಾಗ್ಗಳು

Mini bus Male mahadeshwara ಗಾಯಾಳು ಚಾಲಕನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ