ತಲೆಮರೆಸಿಕೊಂಡಿದ್ದ ಸೈಕೋ ಕಾಮುಕ ಬಂಧನ

An psycho arrested by police

11-08-2018

ಮೈಸೂರು: ನರ್ಸಿಂಗ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಸೈಕೋನನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಲ್ತಾಫ್ (23) ಬಂಧಿತ ಆರೋಪಿ. ಕಳೆದ ತಿಂಗಳ 28ರ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ, ದೇವರಾಜ ಮೊಹಲ್ಲಾದ ನರ್ಸಿಂಗ್ ಹಾಸ್ಟೆಲ್‌ಗೆ ನುಗ್ಗಿದ್ದ ಅಲ್ತಾಫ್. ಸೆಕ್ಯೂರಿಟಿ ಗಾರ್ಡ್ ಗೆ ಚಾಕು ತೋರಿಸಿ ಬೆದರಿಕೆ ಹಾಕಿ ಅಕ್ರಮ ಪ್ರವೇಶ ಮಾಡಿದ್ದ. ಈ ವೇಳೆ ಹಾಸ್ಟೆಲ್ ನ ಕೊಠಡಿಯಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ.

ಈ ಕುರಿಂತೆ ಮೈಸೂರು ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಂತರ ಅಲ್ತಾಫ್ ತಲೆಮರೆಸಿಕೊಂಡಿದ್ದ. ಆದರೆ ಬಲೆ ಬೀಸಿದ್ದ ಪೊಲೀಸರಿಗೆ ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಮಣಿನಾಲ್ಕೂರು ಗ್ರಾಮದವನಾದ ಅಲ್ತಾಫ್, ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ. ಖಚಿತ ಮಾಹಿತಿಯಾಧರಿಸಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ನಂದಕುಮಾರ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ನಂತರ ದೇವರಾಜ ಪೊಲೀಸರ ವಶಕ್ಕೆ ಆರೋಪಿಯನ್ನು ಒಪ್ಪಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Sexual harassment psycho ಬೆದರಿಕೆ ನರ್ಸಿಂಗ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ