ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಮುಖಂಡರ ಧರಣಿ

BJP leaders protest in front of Deputy Commissioner

11-08-2018

ಬೀದರ್: ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬೀದರ್ ನಲ್ಲಿ ಬಿಜೆಪಿ ಜಿಲ್ಲಾ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಈ ವೇಳೆ ಸಮ್ಮಿಶ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಬೀದರ್ ನ ಬ್ರೀಮ್ಸ್ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದಾರೆ. ಬಿ.ಎಸ್.ಎಸ್.ಕೆಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವ್ಯಹಾರದಲ್ಲಿ ಭಾಗಿಯಾದವರನ್ನು ಬಂಧಿಸಬೇಕು ಎಂದೂ ಕೂಡ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿಯ ಸ್ಥಳೀಯ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

loan waiver BJP ಭ್ರಷ್ಟಾಚಾರ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ