ಮಡಿಕೇರಿ-ಚಿಕ್ಕಮಗಳೂರಲ್ಲಿ ಮತ್ತೆ ಭಾರೀ ಮಳೆ

Heavy Rain at chikmagalur and madikeri

13-08-2018

ಮಡಿಕೇರಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆ ಹಿನ್ನೆಲೆ, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶಿಸಿದ್ದಾರೆ. ಅಲ್ಲದೆ ನದಿ ತಟದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ನದಿ, ಜಲಪಾತ, ಗುಡ್ಡ ಪ್ರದೇಶಕ್ಕೆ ತೆರಳುವ ಪ್ರವಾಸಿಗರಿಗೂ ಎಚ್ಚರಿಕೆ ನೀಡಲಾಗಿದೆ. ತುರ್ತು ಸ್ಪಂದನೆಗೆ ಟೋಲ್ ಫ್ರೀ ದೂರವಾಣಿ ಸಂಖ್ಯೆ 08272-221077 ಕಾರ್ಯನಿರ್ವಹಣೆ ಮಾಡಲಿದ್ದು ಸಹಾಯಕ್ಕಾಗಿ ಕರೆಮಾಡಬಹುದಾಗಿದೆ. ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 35 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ‌. ನದಿ ಪಾತ್ರದ ಜನತೆಗೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ‌.

ಚಿಕ್ಕಮಗಳೂರಲ್ಲೂ ಸಹ ಮಳೆಯ ಅಬ್ಬರ ಕೆಡಿಮೆಯಾಗಿಲ್ಲ, ಭಾರಿ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಮೂರು ತಾಲ್ಲೂಕುಗಳಾದ ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ‌ ಶ್ರೀರಂಗಯ್ಯ ಆದೇಶಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Heavy Rain Dam ನದಿ ಪಾತ್ರ ಜಲಪಾತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ