ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ವಿಧಿವಶ

Former Lok Sabha Speaker Somnath Chatterjee Dies At 89

13-08-2018

ಕೋಲ್ಕತ್ತ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ(89) ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಿನ್ನೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಎರಡು ತಿಂಗಳಿಂದ ಅವರಿಗೆ ಡಯಾಲಿಸಿಸ್‌ ಕೂಡ ನಡೆಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. 10 ಭಾರಿ ಸಂಸದರಾಗಿ ಆಯ್ಕೆಯಾಗಿದ್ದರು ಚಟರ್ಜಿ. ಸಿಪಿಎಂನ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್‌ ಆಗಿದ್ದರು.

ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ. 1971 ರಿಂದ 2009ರ ವರೆಗೆ 10 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸೋಮನಾಥ್ ಚಟರ್ಜಿಯವರು ಅದ್ವಿತೀಯ ಸಂಸದೀಯ ಪಟು, ಅವರು ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಕುಮಾರಸ್ವಾಮಿ ಟ್ವೀಟ್  ಮಾಡುವ ಮೂಲಕ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

somnath chatterjee Speaker ಲೋಕಸಭೆ ಆರೋಗ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ