ರೈತರ ಅತ್ಮಹತ್ಯೆ ವಿಚಾರವಾಗಿ ಕೃಷಿ ಸಚಿವರ ಹೇಳಿಕೆ

Agriculture Minister

13-08-2018

ದಾವಣಗೆರೆ: 'ಆತ್ಮಹತ್ಯೆ ಮಾಡಿಕೊಂಡವರೆಲ್ಲಾ ರೈತರು, ಅಥವಾ ಸಾಲದ ಬಾಧೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲು ಬರಲ್ಲ' ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ. ರೈತರ ಆತ್ಮಹತ್ಯೆಗಳ ಕುರಿತಂತೆ ತಾಲೂಕಿ ಈಚಘಟ್ಟ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.

‘ಸತ್ತವರೆಲ್ಲಾ ರೈತರು ಅಥವಾ ಸಾಲದ ಬಾಧೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲು ಬರಲ್ಲ. ಅವರ ಕೌಟುಂಬಿಕ ತೊಂದರೆ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇಂತಹ ಆತ್ಮಹತ್ಯೆ ವಿಚಾರಗಳನ್ನು ಮಾಧ್ಯಮಗಳು ವೈಭವಿಕರಿಸುವುದು ಸರಿಯಲ್ಲ. ರೈತರ ಬಗ್ಗೆ ಸರ್ಕಾರ ಕಾಳಜಿ ಹೊಂದಿದೆ’ ಎಂದು ಮಾಧ್ಯಮದವರ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರೆ ಎಲ್ಲಿ ತೊರಿಸಿ ಎಂದು ಸುದ್ದಿಗಾರರನ್ನೇ ಮರು ಪ್ರಶ್ನೆ ಮಾಡಿದ್ದಾರೆ ಸಚಿವ ಶಿವಶಂಕರ ರೆಡ್ಡಿ.

 


ಸಂಬಂಧಿತ ಟ್ಯಾಗ್ಗಳು

N.H.Shivashankara Re minister ಸಾಲದ ಬಾಧೆ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ