ಅಪಘಾತ: ಗಾಯಾಳುಗಳಿಗೆ ಸಚಿವ ಜಮೀರ್ ನೆರವು

Accident: Minister Zameer helped injured people on road

13-08-2018

ಬೆಂಗಳೂರು: ನಗರದ ಬಳ್ಳಾರಿ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಇಂದು ಮದ್ಯಾಹ್ನ ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ ಅವರು ಅಪಘಾತ ನೋಡಿ ಕಾರು ನಿಲ್ಲಿಸಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಸದಾಶಿವನಗರ ಸಂಚಾರ ಪೊಲೀಸರು ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Zameer ahmed Accident ಜಂಕ್ಷನ್ ನಾಗರೀಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ