ಕೆಲಸ ಸ್ಥಗಿತಗೊಳಿಸಿ ಬೀದಿಗಿಳಿದ ಪೌರಕಾರ್ಮಿಕರು

pourakarmikas protest for 3 months salary at bellary

14-08-2018

ಬಳ್ಳಾರಿ: ಕಳೆದ ಮೂರು ತಿಂಗಳುಗಳಿಂದ ವೇತನ ಪಾವತಿ ಮಾಡದ ಹಿನ್ನೆಲೆ ಪೌರ ಕಾರ್ಮಿಕರು ಪ್ರತಿಭಟನೆಗಿಳಿದಿದ್ದಾರೆ. ತಮ್ಮ ಕೆಲಸ ಕೆಲಸ ಬಹಿಷ್ಕರಿಸಿ ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಬಳ್ಳಾರಿಯ ಪೌರ ಕಾರ್ಮಿಕರು. ಈ ವೇಳೆ ಪಾಲಿಕೆ ಆಯುಕ್ತ ನಾರಾಯಣಪ್ಪ ಹಾಗೂ ಪೌರ ಕಾರ್ಮಿಕರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಸಮಸ್ಯೆ ಪರಿಹಾರ ಮಾಡಿ ಇಲ್ಲವೇ ಪೊರಕೆಯಿಂದ ಹೊಡೆಯುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಸಮಸ್ಯೆ ಬಿಗಡಾಯಿಸುತ್ತಿದ್ದಂತೆ, ಮೇಯರ್ ಹಾಗೂ ಪಾಲಿಕೆ ಸದಸ್ಯರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ನಡುವೆ ಮಹಿಳಾ ಪೌರ ಕಾರ್ಮಿಕರು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕೂಡಲೆ ವೇತನ ಪಾವತಿ ಮಾಡುವಂತೆ ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ