ಯಡಿಯೂರಪ್ಪ ಅವರಿಗೆ ಎರಡು ನಾಲಿಗೆ ಇದೆ !

Kannada News

31-05-2017

ಮೈಸೂರು:- ರಾಜ್ಯದ ರೈತರ ಸಾಲಮನ್ನಾ ವಿಚಾರದಲ್ಲಿ ಮಾಜಿ ಸಿ.ಎಂ. ಯಡಿಯೂರಪ್ಪ ಅವರಿಗೆ ಏನೂ ಗೊತ್ತಿಲ್ಲ. ಅವರು  ಬಾಯಿಗೆ ಬಂದಂತೆ ಮಾತನಾಡಿಕೊಂಡು ತಿರುಗಾಡುತ್ತಿದ್ದಾರೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ 52 ಸಾವಿರ ಕೋಟಿ ಸಾಲ ಮನ್ನಾ ಮಾಡಬೇಕಿದೆ. ಈ ಪೈಕಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 42 ಸಾವಿರ ಕೋಟಿ ಸಾಲ ಮನ್ನಾ ಮಾಡಬೇಕಿದೆ. ಮತ್ತು ಸಹಾಕಾರಿ ಬ್ಯಾಂಕುಗಳಲ್ಲಿ 10 ಸಾವಿರ ಕೋಟಿ ಸಾಲ ಮನ್ನಾ ಮಾಡಬೇಕಿದೆ. ಮೊದಲು ಕೇಂದ್ರ ಸರ್ಕಾರ ತನ್ನ ಪಾಲಿನ ಸಾಲ ಮನ್ನಾ ಮಾಡಲಿ, ಬಳಿಕ ರಾಜ್ಯ ಸರ್ಕಾರ ಉಳಿದ ಸಾಲ ಮನ್ನಾ ಮಾಡಲಿದೆ ಎಂದರು. ರೈತರ ಸಾಲ ಮನ್ನಾ ವಿಚಾರದಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಸಂಸದರು ಸಂಸತ್ ನಲ್ಲಿ ಧ್ವನಿ ಎತ್ತುವುದಿಲ್ಲ. ರೈತರ ಸಾಲಮನ್ನಾ ವಿಚಾರದಲ್ಲಿ ಯಡಿಯೂರಪ್ಪ ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಎರಡು ನಾಲಿಗೆ ಇದೆ ಎಂದು ಹರಿಹಾಯ್ದರು.
 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ