ಅರಬೈಲ್ ಘಾಟ್ ನಲ್ಲಿ ಗುಡ್ಡ ಕಸಿತ: ಸಂಚಾರ ಅಸ್ತವ್ಯಸ್ತ

Heavy Rain at uttar kannada

14-08-2018

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ, ಅರಬೈಲ್ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ತಡೆಯಾಗಿದೆ. ಇನ್ನು ಇದೇ ರಸ್ತೆಯಲ್ಲಿ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಮೇಲೆಯೂ ಗುಡ್ಡ ಕುಸಿದಿದೆ ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ. ಶ್ರೀದುರ್ಗಾಂಬಾ ಎಂಬ ಖಾಸಗಿ ಬಸ್ ಮೇಲೆ ಮಣ್ಣು ಕುಸಿದಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ- ಅಂಕೋಲಾ ನಡುವೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತ ಉಂಟಾದ ಪ್ರದೇಶದಲ್ಲಿ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲೇ ಯಲ್ಲಾಪುರ ಪೊಲೀಸ್ ಬೀಡುಬಿಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Heavy rain Ghat section ಅರಬೈಲ್ ಘಾಟ್ ಯಲ್ಲಾಪುರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ