ಮಹಾ ಮಳೆಗೆ ಶಿವಮೊಗ್ಗದ ಜನ ಹೈರಾಣು

shimoga, chikmagalur rivers flowing heavily because of rain

14-08-2018

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದೂ ಕೂಡ ಮಳೆರಾಯ ಅಬ್ಬರಿಸಿದ್ದಾನೆ. ಭಾರೀ ಮಳೆ ಹಿನ್ನೆಲೆ ಜಿಲ್ಲೆಯ ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದ ತಾಲ್ಲೂಕಿನ ಶಾಲೆಗಳು ಮತ್ತು ಪಿಯು ಕಾಲೇಜಿಗೆ ರಜೆ ನೀಡಲಾಗಿದೆ. ಇನ್ನು ತೀರ್ಥಹಳ್ಳಿಯ ದೇವಸ್ಥಾನದ ಶ್ರೀ ರಾಮಮಂಟಪ ಜಲಾವೃತಗೊಂಡಿದೆ. ಅದಲ್ಲದೆ ಅಪಾಯದ ಸ್ಥಿತಿಯಲ್ಲಿ ತುಂಗಾನದಿ ಪ್ರವಾಹದ ರೀತಿಯಲ್ಲಿ ಹರಿಯುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾಡಳಿತ ತಕ್ಷಣ ತೀರ್ಥಹಳ್ಳಿ ಸ್ಥಿತಿಯತ್ತ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿಯೂ ಮಳೆ ಸುರಿಯುತ್ತಲೇ ಇದೆ. ನಿನ್ನೆ ಇಡೀ ರಾತ್ರಿ ಸುರಿದ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ತುಂಗಾ ನದಿ. ಶೃಂಗೇರಿಯ ಪ್ಯಾರಲಲ್ ರಸ್ತೆ, ಗಾಂಧಿ ಮೈದಾನ, ಸಂಧ್ಯಾವಂದನೆ ಮಂಟಪ ಹಾಗೂ ಕಪ್ಪೆ ಶಂಕರನಾರಾಯಣ ದೇವಾಲಯ ಮುಳುಗಡೆ ಭೀತಿ ಎದುರಾಗಿದೆ. ಶೃಂಗೇರಿಯ ಕೆರೆಕಟ್ಟೆ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ಜನ ಹೈರಾಣಾಗಿದ್ದಾರೆ. ಮಳೆ ನಿಲ್ಲಲ್ಲೆಂದು ಜನ ವರುಣನಲ್ಲಿ ಪ್ರಾರ್ಥನೆ ಮೊರೆ ಹೋಗಿದ್ದಾರೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲ್ಲೂಕಿನ ಬಣಗಿಹಳ್ಳದಲ್ಲಿ ಮಹಾಮಳೆಗೆ‌ ಹಸು ಒಂದು ಕೊಚ್ಚಿ ಹೋಗಿದೆ. ಸೇತುವೆ ಮೇಲೆ‌ ಹಸು ಸಂಚರಿಸುವಾಗ ಘಟನೆ ನಡೆದಿದೆ. ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕುದುರೆಮುಖ, ಕಳಸ, ಬಾಳೆಹೊನ್ನೂರಿನಲ್ಲಿ ಕಳೆದ ರಾತ್ರಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಅಪಾಯಮಟ್ಟ ಮೀರಿ ಹರಿಯುತ್ತಿರುವ ಭದ್ರಾ, ತುಂಗಾ, ಹೇಮಾವತಿ ನದಿ ಹಾಗೂ ಹಳ್ಳಗಳು.  ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಐದೂ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rivers Rain ಜಿಲ್ಲಾಡಳಿತ ಹೈರಾಣು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ