ಮಧ್ಯರಾತ್ರಿ ಕಾಮಾಕ್ಷಿಪಾಳ್ಯದಲ್ಲಿ ಪುಂಡರ ಹಾವಳಿ!

A group of people attack on car and TT  vehicles window glasses broken!

14-08-2018

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ (ಟಿಟಿ)ನ ಮೇಲೆ ಕಲ್ಲು ತೂರಾಟ ನಡೆಸಿ ಗಾಜುಪುಡಿ ಮಾಡಿ ಕಿಡಿಗೇಡಿಗಳು ಪರಾರಿಯಾಗಿರುವ ದುರ್ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.

ಮಾರುತಿ ರಿಟ್ಜ್ ಕಾರಿನಲ್ಲಿ ಕುಡಿದ ಮತ್ತಿನಲ್ಲಿ ಬಂದ ಮಧ್ಯರಾತ್ರಿ 2ರ ವೇಳೆ ನಾಲ್ವರು ಕಿಡಿಗೇಡಿಗಳು, ರಸ್ತೆ ಮಧ್ಯೆ ಕಾರು ನಿಲ್ಲಿಸಿ ಅಲ್ಲೇ ಪಕ್ಕ ನಿಂತಿದ್ದ ಕಾರುಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿ ಪರಾರಿಯಾಗಿದ್ದಾರೆ.

ಮೂರು ಇಂಡಿಕಾ ಕಾರು ಮತ್ತು ಮೂರು ಟೆಂಪೋ ಟ್ರಾವೆಲರ್‍ಗಳ ಕಿಟಕಿ ಗಾಜುಗಳನ್ನು ಒಡೆದು ಹಾನಿಗೊಳಿಸಿದ್ದಾರೆ. ಕುಡಿದ ಮತ್ತಿನಲ್ಲಿ ಪುಂಡರು ಈ ಕೃತ್ಯ ನಡೆಸಿದ್ದು, ಕೃತ್ಯವನ್ನು ಸ್ಥಳೀಯರು ಮನೆಯ ಮೇಲಿನಿಂದ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿ ಸ್ಥಳೀಯರು ಮೊಬೈಲ್‍ನಲ್ಲಿ ಸೆರೆಹಿಡಿದಿರುವ ಪುಂಡರ ದೃಶ್ಯಗಳನ್ನು ಪರಿಶೀಲಿಸಿ ಕಿಡಿಗೇಡಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

tempo traveller broken ಮೊಬೈಲ್‍ ಪುಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ