ಸಿಕ್ಕಿಬಿತ್ತು ತಮಿಳುನಾಡಿನ ಸುಲಿಗೆಕೋರರ ಗ್ಯಾಂಗ್

Tamilnadu robbery gang arrested

14-08-2018

ಬೆಂಗಳೂರು: ಬಸ್ಸಿಗೆ ಕಾಯುವ ಪ್ರಯಾಣಿಕರನ್ನು ಡ್ರಾಪ್ ಮಾಡುವುದಾಗಿ ಕಾರಿನಲ್ಲಿ ಹತ್ತಿಸಿಕೊಂಡು ಸ್ವಲ್ಪ ದೂರ ಬಂದ ನಂತರ ಚಾಕು ತೋರಿಸಿ ಬೆದರಿಸಿ, ಹಣ, ಚಿನ್ನಾಭರಣ ದೋಚುತ್ತಿದ್ದ ತಮಿಳುನಾಡು ಗ್ಯಾಂಗ್‍ನ ನಾಲ್ವರು ಸುಲಿಗೆಕೋರರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ನಾಗೇಂದ್ರ ಅಲಿಯಾಸ್ ನಾಗ (20), ವೆಂಕಟೇಶ್ ಅಲಿಯಾಸ್ ವೆಂಕಿ (22), ವಿಜಯ್ ಕುಮಾರ್ ಅಲಿಯಾಸ್ ವಿಜಯ್ (31), ಆನೇಕಲ್‍ನ ಬಸವರಾಜ್ ಅಲಿಯಾಸ್ ರಾಜ (25) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.

ಬಂಧಿತರಿಂದ 10 ಲಕ್ಷ ರೂ. ಮೌಲ್ಯದ ಇಂಡಿಕಾ ಕಾರು, ಮಾರುತಿ ಸ್ವಿಫ್ಟ್ ಕಾರು ಸೇರಿ 2 ಕಾರುಗಳು, 84 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ಪರಪ್ಪನ ಅಗ್ರಹಾರದ 2, ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಮಹದೇವಪುರ, ತಲಘಟ್ಟಪುರ ಪೊಲೀಸ್ ಠಾಣೆಗಳ ತಲಾ ಒಂದು ಸೇರಿ 7 ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಗಳು ರಾತ್ರಿ ಹಾಗೂ ಮುಂಜಾನೆ ವೇಳೆ ಕಾರಿನಲ್ಲಿ ಸಂಚರಿಸುತ್ತಾ ಬಸ್ಸಿಗೆ ಕಾಯುವವರನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನ, ನಗದು, ಬೆಲೆ ಬಾಳುವ ವಸ್ತುಗಳನ್ನು ಬೆದರಿಸಿ, ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Tamil Nadu drop ಸುಲಿಗೆ ಚಿನ್ನಾಭರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ