ಬಾಬಾ ಬುಡನ್ ಗಿರಿ-ಮಳ್ಳಯನಗಿರಿ ಮಾರ್ಗದಲ್ಲಿ ಸಂಚಾರ ಸ್ಥಗಿತ!

vehicles and tourists are not allowed to mullayanagiri due to rain!

16-08-2018

ಚಿಕ್ಕಮಗಳೂರು: ರಾಜ್ಯದ ಪ್ರಸಿದ್ಧ ಪ್ರವಾಸಿತಾಣವಾದ ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿ‌  ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ ಈ ಭಾಗದಲ್ಲಿ ಗುಡ್ಡ ಕುಸಿತ ಹಾಗೂ ರಸ್ತೆ ಕುಸಿಯುವ ಭೀತಿ ಇರುವುದರಿಂದ ವಾಹನ ಸಂಚಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಭಾಗದಲ್ಲಿ ಅಲ್ಲಲ್ಲಿ ನಿಧಾನವಾಗಿ ರಸ್ತೆ ಕುಸಿಯುತ್ತಿದ್ದು, ಹತ್ತಾರು ಕಡೆ ಗುಡ್ಡಗಳೂ ಸಹ ಕುಸಿಯುತ್ತಿವೆ. ಆದ್ದರಿಂದ ಅಪಾಯದ ಮುನ್ಸೂಚನೆ ಇರುವುದರಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇನ್ನು ಮೂರ್ನಾಲ್ಕು ದಿನ‌ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಪ್ರವಾಸಿಗರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಬಂಧ ಹೇರಿದೆ ಪೊಲೀಸ್ ಇಲಾಖೆ.


ಸಂಬಂಧಿತ ಟ್ಯಾಗ್ಗಳು

Baba Budan giri Mullayanagiri ಪ್ರವಾಸಿತಾಣ ಸ್ಥಗಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ