ಸರ್ಕಾರಿ ಶಾಲೆ: ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಶಿಕ್ಷಕರ ಅಸಡ್ಡೆ

Government School: Teachers are indifferent to the Independence Day celebration

16-08-2018

ತುಮಕೂರು: ಜಿಲ್ಲೆಯ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ದಿನದಂದು, ರಾಷ್ಟ್ರದ್ವಜಕ್ಕೆ ಅಪಮಾನ ಮಾಡುವಂತಹ ಘಟನೆ ನಡೆದಿದೆ. ಸ್ವಾತಂತ್ರ್ಯೋತ್ಸವ ದಿನದಂದು ಸರ್ಕಾರಿ ಶಾಲಾ ಶಿಕ್ಷಕರು ಅಸಡ್ಡೆ ತೋರಿದ್ದಾರೆ. ಧ್ವಜಾರೋಹಣಕ್ಕೆ ಕಂಬವಿದ್ದರೂ ಮರದ ಟೊಂಗೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಈ ಕುರಿತು ಕನಿಷ್ಠ ಜ್ಞಾನವಿಲ್ಲದ ಶಿಕ್ಷಕರಿಂದ ಮಕ್ಕಳ ಭವಿಷ್ಯ ಸಾಧ್ಯವೇ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ದೇಶ ಪ್ರೇಮ ಬಿತ್ತುವ ಶಿಕ್ಷಕರಿಂದಲೇ ಈ ರೀತಿ ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಅಸಡ್ಡೆ ತೋರಿದ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

National flag independence day ಆಕ್ರೋಶ ಅಸಡ್ಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ