ಧಾರಾಕಾರ ಮಳೆ-ರಸ್ತೆ ಬಿರುಕು: ಆತಂಕದಲ್ಲಿ ಗ್ರಾಮಸ್ಥರು

road crack at chikmagalur koppa taluk!

16-08-2018

ಚಿಕ್ಕಮಗಳೂರು: ಮಲೆನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಸಮೀಪದ ಗುಡ್ಡೆತೋಟದ ರಸ್ತೆ ಬಿರುಕು ಬಿಟ್ಟಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಬಿರುಕು ಬಿಟ್ಟಿರುವ ರಸ್ತೆ ನಾಲ್ಕು ಗ್ರಾಮಗಳಿಗೆ ಸಂಚಾರ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ನಾಲ್ಕೈದು ಕಡೆಯಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಇದೀಗ ರಸ್ತೆ ಮಾರ್ಗವಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತು ಯಾವ ಸಮಯದಲ್ಲಿ ಏನಾಗುತ್ತದೋ ಎಂದು ಭೀತಿಯಲ್ಲೇ ದಿನ ಕಳೆಯುತ್ತಿದ್ದಾರೆ ಸುತ್ತಮುತ್ತಲಿನ ಗ್ರಾಮಸ್ಥರು.


ಸಂಬಂಧಿತ ಟ್ಯಾಗ್ಗಳು

chikmagalur Road ನಾಲ್ಕೈದು ಧಾರಾಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ