ಅಟಲ್ ಜಿ ಆರೋಗ್ಯ ಸುಧಾರಣೆಗೆ ಅಭಿಮಾನಿಗಳ ವಿಶೇಷ ಪೂಜೆ

Special worship for Atal Bihari

16-08-2018

ಚಿತ್ರದುರ್ಗ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸುಧಾರಣೆಗಾಗಿ ಚಿತ್ರದುರ್ಗ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕ ಪೂಜೆ-ಪ್ರಾರ್ಥನೆ ನಡೆಸಿದ್ದಾರೆ. ನಗರದ ನೀಲಕಂಠೇಶ್ವರ ದೇಗುಲದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆಯಷ್ಟೇ ಏಮ್ಸ್ ನ ವೈದ್ಯರು ಅಟಲ್ ಬಿಹಾರಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದರು.

ಕೊಪ್ಪಳದಲ್ಲೂ ಸಹ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ, ಆರೋಗ್ಯ ಸುಧಾರಣೆಗಾಗಿ ಕೊಪ್ಪಳದ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬಿಜೆಪಿ ಕಾರ್ಯಕರ್ತರು. ಈಶ್ವರ ದೇವಸ್ಥಾನದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಿ, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Atal bihari vajpayee health ದೇವಸ್ಥಾನ ಗಂಭೀರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ