ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿಗಳ ಅರೆಸ್ಟ್

police arrested 2 rowdy sheeters!

16-08-2018

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಗ್ಯಾಂಗ್ ಕಟ್ಟಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ವೈಯಾಲಿ ಕಾವಲ್ ಠಾಣೆಯ ರೌಡಿಶೀಟರ್ ಸತೀಶ್, ಕೆ.ಪಿ.ಅಗ್ರಹಾರ ಠಾಣೆಯ ರೌಡಿಶೀಟರ್ ಶೇಖರ್ ಹಾಗೂ ಉದಯ್ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳು ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಬಿನ್ನಿ ಸ್ಟೋನ್ ಗಾರ್ಡನ್ ರಸ್ತೆಯ ಇಂದಿರಾ ಕ್ಯಾಂಟಿನ್ ಬಳಿ ಮಾರಕಾಸ್ತ್ರಗಳನ್ನು ಹಿಡಿದು, ಅದೇ ರಸ್ತೆಯಲ್ಲಿ ಬರುವ ಹಣವಂತರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸಲು ಸಜ್ಜಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಸಿಸಿಬಿಯ ಸಂಘಟಿತ ಅಪರಾಧ ವಿಭಾಗದ ಎಸಿಪಿ ಮರಿಯಪ್ಪ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಂದು ಲಾಂಗ್, ಡ್ರ್ಯಾಗರ್ ಹಾಗೂ ಕಾರದ ಪುಡಿ ಪೊಟ್ಟಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Rowdy CCB ಖಚಿತ ಮಾಹಿತಿ ಸ್ವಾತಂತ್ರ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ