ಬಡ್ತಿ ಮೀಸಲಾತಿ: ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿಕೆ

Reservation in Promotion: Attorney General KK Venugopal

16-08-2018

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೆನೆಪದರ ವರ್ಗಕ್ಕೆ ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟಿಗೆ ತಿಳಿಸಿದೆ. ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಸಂವಿಧಾನಿಕ ಪೀಠದ ಮುಂದೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಈ ಹೇಳಿಕೆ ನೀಡಿದ್ದಾರೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗದವರಿಗೂ ಇದೇ ನಿಯಮ ಅನ್ವಯಿಸುತ್ತದೆ ಎಂದು ಉನ್ನತ ಕಾನೂನು ಅಧಿಕಾರಿ ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಜಾತಿ ಪಂಗಡದ ಕೆನೆಪದರವನ್ನು ಮೀಸಲಾತಿಯಿಂದ ಹೊರಗಿಡುವ ನಿರ್ಧಾರ ರಾಷ್ಟ್ರಪತಿ, ಸಂಸತ್ ಕೈಯಲಿದ್ದು, ಈ ಸಾಹಸ ನ್ಯಾಯಾಲಯದಲ್ಲಿ ಬಹಿರಂಗವಾಗಿ ನಡೆಯುವಂತಹದ್ದಲ್ಲ ಎಂದು ಅವರು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ