ಮರೆಯಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ

atal bihari vajpayee is no more

16-08-2018

ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ದೇಶದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ವಾಜಪೇಯಿ ಅವರಿಗೆ 93 ವರ್ಷ ವಯಸ್ಸಾಗಿತ್ತು. ಜೂನ್‌ 11ರಿಂದ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಜಪೇಯಿ ಅವರು ಇಂದು ಸಂಜೆ 5.05ಕ್ಕೆ ಇಹಲೋಕ ತ್ಯಜಿಸಿದ್ದಾರೆ. ನಿನ್ನೆಯಿಂದ ವಾಜಪೇಯಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿತ್ತು. ಆದರೆ, ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ವಾಜಪೇಯಿ ಅವರು ವಿಧಿವಶರಾಗಿದ್ದಾರೆ. ಏಮ್ಸ್‌ ಆಸ್ಪತ್ರೆಯ ಪತ್ರಿಕಾ ಪ್ರಕಟಣೆಯಲ್ಲಿ ವಾಜಪೇಯಿ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ವಾಜಪೇಯಿ ಅವರ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಕಳೆದ 24 ಗಂಟೆಗಳಲ್ಲಿ ಪ್ರಧಾನಿ ಅವರು 2 ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಾಜಪೇಯಿ ಅವರ ಆಪ್ತ ಗೆಳೆಯ ಎಲ್‌.ಕೆ.ಅಡ್ವಾಣಿ ಕೂಡ ಆಸ್ಪತ್ರೆಯಲ್ಲಿಯೇ ಇದ್ದರು. ಅಲ್ಲದೇ, ಕೇಂದ್ರ ಸಂಪುಟದ ಹಿರಿಯ ಸಚಿವರು ಕೂಡ ಏಮ್ಸ್‌ ಆಸ್ಪತ್ರೆಯಲ್ಲಿಯೇ ಬಿಡುಬಿಟ್ಟಿದ್ದರು. ಏಮ್ಸ್ ಆಸ್ಪತ್ರೆಯ ನುರಿತ ವೈದ್ಯರ ತಂಡ ಸತತ ಪ್ರಯತ್ನ ಕೊನೆಗೂ ಫಲ ನೀಡದೇ ಇರುವುದು, ವಾಜಪೇಯಿ ಅವರ ಅಸಂಖ್ಯಾತ ಅಭಿಮಾನಿಗಳ ದುಃಖಕ್ಕೆ ಕಾರಣವಾಗಿದೆ. ಇಡೀ ದೇಶವೇ ವಾಜಪೇಯಿ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ.


ಸಂಬಂಧಿತ ಟ್ಯಾಗ್ಗಳು

Atal Bihari Vajpayee AIIMS ಆರೋಗ್ಯ ಅಜಾತಶತ್ರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ