ಬಿಜೆಪಿ ಕಚೇರಿಯಲ್ಲಿ ವಾಜಪೇಯಿಗೆ ಶ್ರದ್ಧಾಂಜಲಿ

final tribute to Vajpayee at bjp office

17-08-2018

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆ, ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದ್ದಾರೆ ಬಿಜೆಪಿ ನಾಯಕರು. ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಆರ್.ಅಶೋಕ್, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರ್ ಮೂರ್ತಿ, ಶಾಸಕ ವಿ.ಸೋಮಣ್ಣ, ನಟ ಜಗ್ಗೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಶ್ರದ್ಧಾಂಜಲಿ ನಂತರ ಮಾತನಾಡಿದ ಆರ್.ಅಶೋಕ್, 'ವಾಜಪೇಯಿಯವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ. ವಾಜಪೇಯಿ ಅಜಾತಶತ್ರು ಎನಿಸಿಕೊಂಡ ಅಪರೂಪದ ರಾಜಕಾರಣಿ, ದೇಶಕ್ಕೆ ಅವರ ಕೊಡುಗೆ ಅಪಾರ, ಪೋಖ್ರಾನ್ ಅಣುಬಾಂಬು ಪರೀಕ್ಷೆ, ಕಾರ್ಗಿಲ್ ಯುದ್ದದಲ್ಲಿ ಗೆಲುವಿನಂತಹ ಮಹಾನ್ ಸಾಧನೆ ಮಾಡಿದ್ದಾರೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ' ಎಂದು ಸ್ಮರಿಸಿದರು.


ಸಂಬಂಧಿತ ಟ್ಯಾಗ್ಗಳು

BJP office vajpayee ಪೋಖ್ರಾನ್ ಮಹಾನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ