ಜಲಾವೃತ ಪ್ರದೇಶಗಳಿಗೆ ಸಚಿವ ಎನ್.ಮಹೇಶ್ ಭೇಟಿ

Minister N.Mahesh visited villages near cauvery river

17-08-2018

ಚಾಮರಾಜನಗರ: ಒಂದೆಡೆ ಭಾರೀ ಮಳೆ ಇನ್ನೊಂದೆಡೆ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದ್ದು, ಇದರಿಂದ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಾವೇರಿ ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿರುವ ಹಿನ್ನೆಲೆ, ಜಲಾವೃತಗೊಂಡ ಗ್ರಾಮಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಜಿ ಕೇಂದ್ರಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಸಚಿವ ಮಹೇಶ್ ಮನವಿ ಮಾಡಿದ್ದಾರೆ. ಅಲ್ಲದೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವರು, ಜಿಲ್ಲಾಡಳಿತ ಪರಿಹಾರ ನೀಡಲು ಮುಂದಾಗಿದೆ,  ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳ ಮುಂಜಾಗ್ರತ ಕ್ರಮಕ್ಕೆ ಶ್ಲಾಘಿಸಿದ್ದಾರೆ. ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ಶೀಘ್ರದಲ್ಲೆ ಸೂಕ್ತ ಪರಿಹಾರ ನೀಡುವುದಾಗಿಯೂ, ಬೆಳೆ ನಾಶ ಅಂದಾಜಿಸಿ ಪರಿಹಾರ ನೀಡುವುದಾಗಿ, ಪ್ರವಾಹ ಪೀಡಿತ ಗ್ರಾಮ ದಾಸನಪುರದಲ್ಲಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

n mahesh Minister ಜವಾಬ್ದಾರಿ ಆಸ್ತಿ-ಪಾಸ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ