ಕೊಡಗಿನಾದ್ಯಂದ ಭಯಂಕರ ಮಳೆ: ಮಾಹಿತಿ ಪಡೆದ ಸಿಎಂ

Heavy rain in kodagu: cm kumaraswamy asked for information

17-08-2018

ಬೆಂಗಳೂರು:ರಾಜ್ಯದ ಕರಾವಳಿ ಹಾಗೂ ಮಲೆನಾಡ ಭಾಗದಲ್ಲಿ ಭಾರೀ ಮಳೆಯಿಂದ ತಲೆದೋರಿರುವ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದ ಸಿಲುಕಿಕೊಂಡ ಜನರ ರಕ್ಷಣೆ ಮತ್ತು ಇತರ ಪರಿಹಾರ ಕಾರ್ಯಾಚರಣೆಗಳ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಂದ ಸಿಎಂ ಕುಮಾರಸ್ವಾಮಿ ಅವರು ಮಾಹಿತಿ ಪಡೆದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಸೇನೆಯು ನೆರವಿಗೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿ ಶಾಮಕ ದಳ, ಕ್ವಿಕ್ ರೆಸ್ಪಾನ್ಸ್ ಟೀಮ್ ಮೊದಲಾದ ತಂಡಗಳು ಜನರ ರಕ್ಷಣೆ ಮಾಡುತ್ತಿವೆ.

ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯಗಳ ಮಾಹಿತಿ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳೂ ಸಹ ಆಯಾ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಗಳ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy Kodagu rain ಪ್ರವಾಹ ಸಂಪರ್ಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ